ನಕ್ಸಲರು (ಸಾಂಕೇತಿಕ ಚಿತ್ರ)
ರಾಯಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟಿಸಿ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾರ್ಪಾ ಗ್ರಾಮದ ಬಳಿ ಗಸ್ತು ತಿರುಗುತ್ತಿದ್ದಾಗ ವೇಳೆ ಕಚ್ಚಾ ಬಾಂಬ್ ಸ್ಫೋಟಿಸಿ ಇಬ್ಬರು ಬಿಎಸ್‌ಎಫ್ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತೀಚೆಗೆ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಮೂವರು ಗಾಯಗೊಂಡಿದ್ದರು.
ಜನವರಿ 6ರಂದು ಬಿಜಾಪುರ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಬಳಸಿ ಬಸ್ ಒಂದನ್ನು ಸ್ಫೋಟಿಸಿದ್ದರು. ಪರಿಣಾಮ 8 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ನಾಗರಿಕ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.