ADVERTISEMENT

ಉತ್ತರ ಪ್ರದೇಶ: ಕಾಂಗ್ರೆಸ್‌ಗೆ ಇಬ್ಬರು ಹಿರಿಯ ನಾಯಕರ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 12:58 IST
Last Updated 30 ಆಗಸ್ಟ್ 2021, 12:58 IST
ಕಾಂಗ್ರೆಸ್‌–ಸಾಂದರ್ಭಿಕ ಚಿತ್ರ
ಕಾಂಗ್ರೆಸ್‌–ಸಾಂದರ್ಭಿಕ ಚಿತ್ರ   

ಬಲಿಯಾ (ಉತ್ತರ ಪ್ರದೇಶ): ಎಐಸಿಸಿ ಸದಸ್ಯರಾಗಿದ್ದ ಉತ್ತರ ಪ್ರದೇಶದ ಇಬ್ಬರು ಹಿರಿಯ ಕಾಂಗ್ರೆಸ್‌ ಮುಖಂಡರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಶೈಲೇಂದ್ರ ಸಿಂಗ್‌ ಮತ್ತು ರಾಜೇಶ್‌ ಸಿಂಗ್‌ ರಾಜೀನಾಮೆ ನೀಡಿದ ಮುಖಂಡರು. ಭಾನುವಾರ ತಮ್ಮ ರಾಜೀನಾಮೆ ಪತ್ರವನ್ನು ಉತ್ತರ ಪ್ರದೇಶ ಕಾಂಗ್ರೆಸ್‌ ಸಮಿತಿ (ಯುಪಿಸಿಸಿ) ಅಧ್ಯಕ್ಷ ಅಜಯ್‌ ಕುಮಾರ್‌ ಲಲ್ಲು ಅವರಿಗೆ ಕಳುಹಿಸಿದ್ದಾರೆ.

ಲಲ್ಲು ಅವರು ಯುಪಿಸಿಸಿ ಅಧ್ಯಕ್ಷರಾದ ಬಳಿಕ ನಿಷ್ಠಾವಂತ ಮತ್ತು ಹಳೆಯ ನಾಯಕರನ್ನು ಕಡೆಗಣಿಸಿದ್ದಾರೆ. ಹೀಗಾಗಿ, ಪಕ್ಷ ತ್ಯಜಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಈ ನಾಯಕರು ದೂರಿದ್ದಾರೆ.

ADVERTISEMENT

ಪಕ್ಷದ ಪರಿಸ್ಥಿತಿ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೂ ತಿಳಿಸಲಾಗಿದೆ. ಆದರೆ, ಅವರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶೈಲೇಂದ್ರ ಸಿಂಗ್‌ ತಿಳಿಸಿದ್ದಾರೆ.

ಈ ನಾಯಕರ ಆರೋಪಗಳು ಆಧಾರರಹಿತವಾಗಿವೆ ಎಂದು ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ರಾಘವೇಂದ್ರ ಪ್ರತಾಪ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.