ADVERTISEMENT

ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು ಪೊಲೀಸರು ಸೇರಿ ನಾಲ್ವರ ಸಾವು

ಪಿಟಿಐ
Published 12 ಜೂನ್ 2021, 10:00 IST
Last Updated 12 ಜೂನ್ 2021, 10:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡುಉಗ್ರರು ಶನಿವಾರ ದಾಳಿ ನಡೆಸಿದ್ದು, ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ನಾಲ್ವರು ಮೃತಪಟ್ಟಿದ್ಧಾರೆ. ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸೊಪೋರದ ಮೇನ್‌ಚೌಕ್‌ ಬಳಿ ಉಗ್ರರು ಸಿಆರ್‌‍ಪಿಎಫ್‌ ಮತ್ತು ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ಪೊಲೀಸರು ಮತ್ತು ಇಬ್ಬರು ನಾಗರಿಕರು ಹತರಾಗಿದ್ದಾರೆ. ಒಬ್ಬ ಪೊಲೀಸ್‌ ಸಿಬ್ಬಂದಿ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

‘ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.