
ಬಂಧನ
(ಸಾಂದರ್ಭಿಕ ಚಿತ್ರ)
ನವದೆಹಲಿ: ಇತ್ತೀಚೆಗೆ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಅಪರಾಧಿಗಳನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ದೆಹಲಿಯ ಶಹದಾರದ ವಿವೇಕ್ ವಿಹಾರ್ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಾಬಿ ಅಲಿಯಾಸ್ ಅತುಲ್ (19), ಪರಸ್ ಶರ್ಮಾ ಅಲಿಯಾಸ್ ಪ್ರಿನ್ಸ್ (26) ಬಂಧಿತರು.
‘ಜನವರಿ 2 ರಂದು ನಡೆದ ಗುಂಡಿನ ದಾಳಿಯಲ್ಲಿ ಈ ಇಬ್ಬರು ವ್ಯಕ್ತಿಗಳು ಭಾಗಿಯಾಗಿದ್ದರು. ನಮ್ಮ ತಂಡಕ್ಕೆ ಆರೋಪಿಗಳ ಬಗ್ಗೆ ಮಾಹಿತಿ ಲಭಿಸಿತು. ಆರೋಪಿಗಳನ್ನು ಆನಂದ್ ವಿಹಾರ್ ಪ್ರದೇಶದಲ್ಲಿ ಪತ್ತೆ ಮಾಡಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಂಧಿಸಲು ಹೋದಾಗ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಅವರ ಕಾಲಿಗೆ ಗುಂಡು ಹೊಡೆದು ಬಂಧಿಸಲಾಯಿತು. ಗುಂಡು ಹೊಡೆಯುವುದಕ್ಕೂ ಮುನ್ನ ಎಚ್ಚರಿಕೆಯಾಗಿ ಗಾಳಿಯಲ್ಲೂ ಗುಂಡು ಹಾರಿಸಲಾಯಿತು. ಇಬ್ಬರಿಗೂ ತಕ್ಷಣ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗಳು ಅಪರಾಧ ಹಿನ್ನೆಲೆಯಳ್ಳವರಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.