ಬಂಧನ
(ಸಾಂದರ್ಭಿಕ ಚಿತ್ರ)
ನೊಯ್ಡಾ: ಹಲವು ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಅಪರಾಧಿಗಳನ್ನು ಎನ್‌ಕೌಂಟರ್ ಬಳಿಕ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಹರಿಯಾಣದ ಫರಿದಾಬಾದ್‌ನ ವಿಜಯ್ (25) ಮತ್ತು ಮೋರ್ನಾ ಗ್ರಾಮದ ನೌಶಾದ್ (22) ಬಂಧಿತರು.
ಗುರುವಾರ ತಡರಾತ್ರಿ ನೊಯ್ಡಾದ ಸೆಕ್ಟರ್ -44 ರ ಅಮಿಟಿ ಸ್ಕೂಲ್ ವೃತ್ತದಲ್ಲಿ ತಪಾಸಣೆ ನಡೆಸುತ್ತಿದ್ದಾಗ, ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳಿಗೆ ನಿಲ್ಲಿಸಲು ಪೊಲೀಸರು ಸೂಚಿಸಿದ್ದಾರೆ. ಈ ವೇಳೆ ಗುಂಡಿ ಹಾರಿಸಿ ಓಡಿಹೋಗಲು ಪ್ರಯತ್ನಿಸಿದ್ದಾರೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಸುಮಿತ್ ಕುಮಾರ್ ಶುಕ್ಲಾ ಹೇಳಿದ್ದಾರೆ.
ಪೊಲೀಸರು ಪ್ರತಿದಾಳಿ ನಡೆಸಿದಾಗ ವಿಜಯ್ ಕಾಲಿಗೆ ಗುಂಡು ತಗುಲಿದೆ. ನೌಶಾದ್ ಪರಾರಿಯಾಗಿದ್ದ. ಆದರೆ ಬಳಿಕ ಸಿಕ್ಕಿಬಿದ್ದ ಎಂದು ಅವರು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ನಡೆದ ಡಜನ್‌ಗೂ ಅಧಿಕ ದರೋಡೆ ಪ್ರಕರಣಗಳಲ್ಲಿ ಈ ಇಬ್ಬರೂ ಬೇಕಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ 8 ಮೊಬೈಲ್ ಫೋನ್‌ಗಳು, ಒಂದು ನಾಡ ಪಿಸ್ತೂಲು ಮತ್ತು ಒಂದು ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ ಎಂದು ಶುಕ್ಲಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.