ADVERTISEMENT

ದೆಹಲಿಯ ಚಪ್ಪಲಿ ಕಾರ್ಖಾನೆಯಲ್ಲಿ ಬೆಂಕಿ: ಇಬ್ಬರ ಸಾವು

ಪಿಟಿಐ
Published 1 ನವೆಂಬರ್ 2022, 10:42 IST
Last Updated 1 ನವೆಂಬರ್ 2022, 10:42 IST
ಅಗ್ನಿ ಅನಾಹುತದಲ್ಲಿ ಸಿಲುಕಿದವರನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು –ಪಿಟಿಐ ಚಿತ್ರ
ಅಗ್ನಿ ಅನಾಹುತದಲ್ಲಿ ಸಿಲುಕಿದವರನ್ನು ರಕ್ಷಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು –ಪಿಟಿಐ ಚಿತ್ರ   

ನವದೆಹಲಿ: ಇಲ್ಲಿನ ನರೇಲಾ ಕೈಗಾರಿಕಾ ಪ್ರದೇಶ ಚಪ್ಪಲಿ ತಯಾರಿಕಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಘಟಕದ ಎರಡನೇ ಮಹಡಿಯಲ್ಲಿ ಬೆಳಿಗ್ಗೆ 9.35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ 10 ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯತ್ನಿಸಿದರು. ಆದಾಗ್ಯೂ ಅಗ್ನಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನಾ ಸ್ಥಳದಿಂದ 20 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಅನೇಕರು ಅಗ್ನಿ ಅವಘಡದಲ್ಲಿ ಸಿಲುಕಿರಬಹುದೆಂಬ ಶಂಕೆ ಇದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.