ADVERTISEMENT

ಮುಂಬೈ | ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ: ಇಬ್ಬರು ಸಜೀವ ದಹನ

ಮೃತ್ಯುಂಜಯ ಬೋಸ್
Published 3 ಡಿಸೆಂಬರ್ 2023, 2:59 IST
Last Updated 3 ಡಿಸೆಂಬರ್ 2023, 2:59 IST
<div class="paragraphs"><p>ಅಗ್ನಿ ಅವಘಡ</p></div>

ಅಗ್ನಿ ಅವಘಡ

   

ಮುಂಬೈ: ಇಲ್ಲಿನ ಗಿರ್ಗಾವ್‌ ಚೌಪಾಟಿ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಶನಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಸಜೀವ ದಹನವಾಗಿದ್ದಾರೆ.

ಗಿರ್ಗಾವ್‌ನ ರಂಗನೇಕರ್ ರಸ್ತೆಯಲ್ಲಿರುವ ಗೋಮತಿ ಭವನ ಕಟ್ಟಡದಲ್ಲಿ ರಾತ್ರಿ 9.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಮಾಹಿತಿ ಮೇರೆಗೆ ಸ್ಥಳಾಕ್ಕಾಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸುಟ್ಟು ಕರಕಲಾದ ಮೃತದೇಹಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಮೃತರ ಗುರುತು ಪತ್ತೆಯಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.