ADVERTISEMENT

ಕೇಂದ್ರ ಸಚಿವ ಸುರೇಶ್ ಗೋಪಿ ಮನೆಯಲ್ಲಿ ಕಳ್ಳತನ: ಇಬ್ಬರು ಪೊಲೀಸ್ ವಶಕ್ಕೆ

ಪಿಟಿಐ
Published 11 ಡಿಸೆಂಬರ್ 2024, 5:43 IST
Last Updated 11 ಡಿಸೆಂಬರ್ 2024, 5:43 IST
<div class="paragraphs"><p>ಸುರೇಶ್ ಗೋಪಿ</p></div>

ಸುರೇಶ್ ಗೋಪಿ

   

ಪಿಟಿಐ

ಕೊಲ್ಲಂ: ಕೇಂದ್ರ ಸಚಿವ ಸುರೇಶ್ ಗೋಪಿ ಅವರ ಮನೆಯಲ್ಲಿ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಎರವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಗೆ ಸಮೀಪವಿರುವ ಸುರೇಶ್ ಗೋಪಿ ಅವರಿಗೆ ಸೇರಿರುವ ಶೆಡ್‌ನಿಂದ ಹಳೆಯ ವಸ್ತುಗಳನ್ನು ಕಳವು ಮಾಡಿದ ಪ್ರಕರಣ ಸಂಬಂಧ 18 ಮತ್ತು 20 ವರ್ಷ ವಯಸ್ಸಿನ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸುರೇಶ್‌ ಗೋಪಿ ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇಲ್ಲದಿದ್ದಾಗ ಕಳ್ಳತನ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.

ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.