ADVERTISEMENT

ಇಬ್ಬರು ಉಗ್ರರ ಬಂಧನ

ಪಿಟಿಐ
Published 14 ನವೆಂಬರ್ 2018, 16:45 IST
Last Updated 14 ನವೆಂಬರ್ 2018, 16:45 IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಪುಲ್ವಾಮಾ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿ ಬಂಧಿಸಿದ್ದಾರೆ.

ಬುಧವಾರಅವಂತಿಪೋರಾ ಪ್ರದೇಶದ ಪಂಜ್‌ಗಾಮ್‌ ಬಳಿ ತಪಾಸಣೆ ನಡೆಸಿದ ಭದ್ರತಾ ಪಡೆಗಳು ಉಗ್ರರನ್ನು ಬಂಧಿಸಿ, ಗ್ರೆನೇಡ್‌ಗಳು ಸೇರಿದಂತೆ ಅಪಾರ ಪ್ರಮಾಣದಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಉಗ್ರರನ್ನುಜಾನ್ ಮೊಹಮ್ಮದ್ ಶೇಖ್ ಮತ್ತು ನಾಸಿರ್ ಉಲ್ ಇಸ್ಲಾಮ್ ಎಂದು ಗುರುತಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.