ADVERTISEMENT

ಜಮ್ಮು ಮತ್ತು ಕಾಶ್ಮೀರ | ಅನಂತನಾಗ್‌ನಲ್ಲಿ ಎನ್‌ಕೌಂಟರ್; ಇಬ್ಬರು ಉಗ್ರರ ಹತ್ಯೆ

ಪಿಟಿಐ
Published 6 ಮೇ 2022, 10:02 IST
Last Updated 6 ಮೇ 2022, 10:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಪಹಲ್ಗಾಮ್‌ನಲ್ಲಿರುವ ಶ್ರೀಚಂದ್‌ ಅರಣ್ಯ ಪ್ರದೇಶದಲ್ಲಿಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಯಿತು. ಅದರಂತೆ, ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಅಡಗಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ ನಂತರ ಪ್ರತಿದಾಳಿ ಮಾಡಲಾಯಿತು. ಈ ವೇಳೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಮೃತರಿಬ್ಬರೂ ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.