ಪಣಜಿ: ‘ಉತ್ತರ ಗೋವಾದ ಕೊಲ್ವಾಲೆ ಗ್ರಾಮದಲ್ಲಿ 1 ಕೆ.ಜಿ.ಯಷ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕರ್ನಾಟಕ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಮಪುಸಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಜಿವ್ಬಾ ದಳವಿ ತಿಳಿಸಿದ್ದಾರೆ.
ರತನ್ ಅವಾಲೆ (20) ಮತ್ತು ಅಬ್ಬಾಸ್ ಖರುಷಿ ಬಂಧಿತ ಆರೋಪಿಗಳು.
‘ಮಹಾರಾಷ್ಟ್ರದ ಒಂದು ನಿರ್ದಿಷ್ಟ ಪ್ರದೇಶದಲ್ಲಿ ಗಾಂಜಾ ದೊರೆತುದುದಾಗಿ ಆರೋಪಿಗಳು ಹೇಳಿದ್ದಾರೆ.ಕೊಲ್ವಾಲೆ ಠಾಣೆಯ ಪೊಲೀಸರು ಹೆಚ್ಚಿನ ತನಿಖೆಗಾಗಿ ಶುಕ್ರವಾರ ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ. ರತನ್ ಹಾಗೂ ಅಬ್ಬಾಸ್ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.