ADVERTISEMENT

ನೋಯ್ಡಾ: ಕಾರುಗಳ ನಡುವೆ ಡಿಕ್ಕಿ, ಮಕ್ಕಳು ಸೇರಿ ಎಂಟು ಮಂದಿಗೆ ಗಾಯ

ಪಿಟಿಐ
Published 19 ಮಾರ್ಚ್ 2023, 4:11 IST
Last Updated 19 ಮಾರ್ಚ್ 2023, 4:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನೋಯ್ಡಾ: ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡೂ ಕಾರುಗಳು ಆಗ್ರಾದಿಂದ ನೋಯ್ಡಾಗೆ ಹೋಗುತ್ತಿದ್ದಾಗ ಶನಿವಾರ ರಾತ್ರಿ 9.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

‘ದಂಕೌರ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದ್ದು, ಎರಡು ಕಾರುಗಳಲ್ಲಿದ್ದ ಎಂಟು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಗಾಯಗೊಂಡವರನ್ನು ಓಂ ಪ್ರಕಾಶ್ ಗೋಯಲ್‌ (60), ಮುಖೇಶ್ ಸೈನಿ (32), ಲತಾ ದೇವಿ (57), ಪ್ರಶಾಂತ್‌ ಗೋಯಲ್‌ (26), ಪಂಕಜ್‌ (35), ಮತ್ತು ಶಾಲು ಗೋಯಲ್‌ (32) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಎರಡು ಮತ್ತು ಆರು ವರ್ಷದ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.