ADVERTISEMENT

ದೆಹಲಿ: ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಬೆಂಕಿ, ಇಬ್ಬರು ಮಹಿಳೆಯರ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜನವರಿ 2023, 5:16 IST
Last Updated 1 ಜನವರಿ 2023, 5:16 IST
ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿರುವ ದೃಶ್ಯ (ಟ್ವಿಟರ್ ಚಿತ್ರ)
ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿರುವ ದೃಶ್ಯ (ಟ್ವಿಟರ್ ಚಿತ್ರ)   

ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ್ II ಪ್ರದೇಶದಲ್ಲಿರುವ ಹಿರಿಯ ನಾಗರಿಕರ ಆರೈಕೆ ಕೇಂದ್ರದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ 13 ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ADVERTISEMENT

ಆರೈಕೆ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ದೆಹಲಿಯ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತೆ ಚಂದನ್ ಚೌಧರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.