ADVERTISEMENT

ತಮಿಳುನಾಡು: ಈರೋಡ್‌ನ ಅಕ್ರಮ ಕಲ್ಲು ಗಣಿಯಲ್ಲಿ ಸ್ಫೋಟ– ಕರ್ನಾಟಕದ ವ್ಯಕ್ತಿ ಸಾವು

ತಮಿಳುನಾಡಿನ ಈರೋಡ್ ಜಿಲ್ಲೆಯ ಅಕ್ರಮ ಕಲ್ಲು ಗಣಿಕಾರಿಕೆಯೊಂದರಲ್ಲಿ ಮಂಗಳವಾರ ತಡರಾತ್ರಿ ಸ್ಫೋಟ ಸಂಭವಿಸಿ ಕರ್ನಾಟಕ ಮೂಲದ ಒಬ್ಬ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ಪಿಟಿಐ
Published 21 ಆಗಸ್ಟ್ 2024, 7:41 IST
Last Updated 21 ಆಗಸ್ಟ್ 2024, 7:41 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಈರೋಡ್: ತಮಿಳುನಾಡಿನ ಈರೋಡ್ ಜಿಲ್ಲೆಯ ಅಕ್ರಮ ಕಲ್ಲು ಗಣಿಕಾರಿಕೆಯೊಂದರಲ್ಲಿ ಮಂಗಳವಾರ ತಡರಾತ್ರಿ ಸ್ಫೋಟ ಸಂಭವಿಸಿ ಕರ್ನಾಟಕ ಮೂಲದ ಒಬ್ಬ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ADVERTISEMENT

ಕರ್ನಾಟಕ ಮೂಲದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದು ಅವರ ಕುಟುಂಬದವರಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.