ADVERTISEMENT

ಉತ್ತರ ಪ್ರದೇಶ: ಹೋಳಿ ಆಚರಣೆ ಸಂಬಂಧ ಘರ್ಷಣೆ, ಇಬ್ಬರ ಸಾವು

ಪಿಟಿಐ
Published 18 ಮಾರ್ಚ್ 2022, 15:55 IST
Last Updated 18 ಮಾರ್ಚ್ 2022, 15:55 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಅಮೇಥಿ: ಇಲ್ಲಿನ ಗ್ರಾಮವೊಂದರಲ್ಲಿ ಶುಕ್ರವಾರ ಹೋಳಿ ಆಚರಣೆ ಸಂಬಂಧ ನಡೆದ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಜಾಮೊ ಪೊಲೀಸ್ ಠಾಣಾ ವ್ಯಾಪ್ತಿಯ ರೆವ್ರಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್‌ ಅಧಿಕಾರಿ ಧೀರೇಂದ್ರ ಕುಮಾರ್‌ ಯಾದವ್‌ ಹೇಳಿದ್ದಾರೆ.

ಮೃತ ಅಖಂಡ ಪ್ರತಾಪ್‌ ಸಿಂಗ್‌ ಅವರಿಗೆ ಅಪರಾಧ ಹಿನ್ನೆಲೆ ಇದ್ದ ಮಾಹಿತಿ ದೊರೆತಿದೆ ಎಂದೂ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.