ಶ್ರೀನಗರ: ಜಮ್ಮು–ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಂಗಮ್ ಎಂಬಲ್ಲಿ ಶನಿವಾರ ನಸುಕಿನಲ್ಲಿ ಭದ್ರತಾ ಪಡೆಗಳು ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಮೃತರನ್ನು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ ಸದಸ್ಯರು ಎಂದು ಗುರುತಿಸಲಾಗಿದೆ. ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶುಕ್ರವಾರ ತಡರಾತ್ರಿಯಿಂದಲೇ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ ಆರಂಭವಾಗಿತ್ತು. ಜಮ್ಮು–ಕಾಶ್ಮೀರ ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ (ಸಿಆರ್‌ಪಿಎಫ್) ಮತ್ತು ಯೋಧರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಹಿಜಬುಲ್ ಮುಜಾಹಿದ್ದಿನ್ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.