ADVERTISEMENT

ಎನ್‌ಕೌಂಟರ್‌: ಕಮಾಂಡರ್‌ ಸೇರಿ ಇಬ್ಬರು ಉಗ್ರರ ಹತ್ಯೆ

ಪಿಟಿಐ
Published 12 ಅಕ್ಟೋಬರ್ 2020, 14:20 IST
Last Updated 12 ಅಕ್ಟೋಬರ್ 2020, 14:20 IST
ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಭದ್ರತಾಪಡೆ ಯೋಧರನ್ನು ನಿಯೋಜಿಸಲಾಗಿದೆ –ಪಿಟಿಐ ಚಿತ್ರ
ಎನ್‌ಕೌಂಟರ್‌ ನಡೆದ ಸ್ಥಳದಲ್ಲಿ ಭದ್ರತಾಪಡೆ ಯೋಧರನ್ನು ನಿಯೋಜಿಸಲಾಗಿದೆ –ಪಿಟಿಐ ಚಿತ್ರ   

ಶ್ರೀನಗರ: ಇಲ್ಲಿನ ಹಳೆಯ ಬರ್ಜುಲ್ಲಾ ಪ್ರದೇಶದಲ್ಲಿ ಭದ್ರತಾಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್‌ ಎ ತಯಬಾ(ಎಲ್‌ಇಟಿ) ಸಂಘಟನೆಯ ಪಾಕಿಸ್ತಾನದ ಕಮಾಂಡರ್‌ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದಾರೆ.

‘ಉಗ್ರರು ಅವಿತಿರುವ ಮಾಹಿತಿಯ ಮೇರೆಗೆ ಭದ್ರತಾಪಡೆ ಯೋಧರು ಸೋಮವಾರ ಬೆಳಿಗ್ಗೆ ಶೋಧ ಕಾರ್ಯ ನಡೆಸುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ಈ ವೇಳೆ ಪ್ರತಿದಾಳಿ ನಡೆಸಿ ಉಗ್ರರನ್ನು ಹೊಡೆದುರುಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಉಗ್ರ ಸಂಘಟನೆಯ ಪಾಕಿಸ್ತಾನ ಕಮಾಂಡರ್‌ ಸೈಫುಲ್ಲಾ ಹತ್ಯೆಗೀಡಾಗಿದ್ದು, ಈತ ನೌಗಾಮ್‌, ಚದೂರಾ ಮತ್ತು ಕಂಡಿಜಾಲ್‌ ಪ್ರದೇಶಗಳಲ್ಲಿ ಭದ್ರತಾಪಡೆಗಳ ಮೇಲೆ ಈಚೆಗೆ ನಡೆದಿದ್ದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದಾನೆ’ ಎಂದು ಜಮ್ಮು–ಕಾಶ್ಮೀರದ ಪೊಲೀಸ್‌ ಮಹಾನಿರ್ದೇಶಕ ದಿಲ್‌ಬಾಗ್‌ ಸಿಂಗ್‌ ಹೇಳಿದ್ದಾರೆ.

ADVERTISEMENT

‘ಶ್ರೀನಗರದಲ್ಲಿ ಈ ವರ್ಷ ಇದುವರೆಗೆ ಎಂಟು ಎನ್‌ಕೌಂಟರ್‌ಗಳು ನಡೆದಿದ್ದು, 18 ಉಗ್ರರು ಸಾವಿಗೀಡಾಗಿದ್ದಾರೆ‘ ಎಂದೂ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.