ADVERTISEMENT

ಶೋಪಿಯಾನ್ ಎನ್‌ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಅಕ್ಟೋಬರ್ 2023, 2:52 IST
Last Updated 10 ಅಕ್ಟೋಬರ್ 2023, 2:52 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್–ಎ–ತಯಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಈ ಕುರಿತು ಕಾಶ್ಮೀರ ವಲಯ ಪೊಲೀಸ್ ಮಾಹಿತಿ ನೀಡಿದೆ.

ADVERTISEMENT

ಮಂಗಳವಾರ ನಸುಕಿನ ವೇಳೆಯಲ್ಲಿ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಕಾರ್ಯಾಚರಣೆಯನ್ನು ನಡೆಸಿದೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಕಾರ್ಯಾಚರಣೆ ಈಗಲೂ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ. ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರ ಹತ್ಯೆಯಲ್ಲಿ ಅಬ್ರಾರ್ ಭಾಗಿಯಾಗಿದ್ದ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾಶ್ಮೀರ ವಲಯ) ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.