ADVERTISEMENT

ಶೋಪಿಯಾನ್‌: ಇಬ್ಬರು ಟಿಆರ್‌ಎಫ್‌ ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 14:43 IST
Last Updated 22 ಜನವರಿ 2022, 14:43 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಕಿಲ್‌ಬಲ್‌ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ದಿ ರೆಸಿಸ್ಟೆನ್ಸ್‌ ಫ್ರಂಟ್‌ (ಟಿಆರ್‌ಎಫ್‌) ಸಂಘಟನೆಗೆ ಸೇರಿದ ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದಾರೆ.

‘ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸ್‌, ಸೇನಾ ಹಾಗೂ ಸಿಆರ್‌ಪಿಎಫ್‌ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

‘ಹತ್ಯೆಯಾದ ಈ ಇಬ್ಬರು ಉಗ್ರರು ಲಷ್ಕರ್‌–ಎ–ತೈಬಾ ಸಂಘಟನೆಯ ಮತ್ತೊಂದು ಉಪಶಾಖೆಯಾದ ಟಿಆರ್‌ಎಫ್‌ಗೆ ಸೇರಿದವರಾಗಿದ್ದು, ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.