ADVERTISEMENT

ತೆಲಂಗಾಣ: ಗುಂಡಿನ ಚಕಮಕಿ, ಇಬ್ಬರು ಮಾವೋವಾದಿಗಳ ಹತ್ಯೆ

ಪಿಟಿಐ
Published 20 ಸೆಪ್ಟೆಂಬರ್ 2020, 7:11 IST
Last Updated 20 ಸೆಪ್ಟೆಂಬರ್ 2020, 7:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೈದರಾಬಾದ್: ತೆಲಂಗಾಣದ ಕುಮಾರಂ ಭೀಮ್ ಜಿಲ್ಲೆಯ ಕದಂಬ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಹತ್ಯೆಯಾಗಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಈ ಭಾಗದಲ್ಲಿ ಪೊಲೀಸರು, ವಿಶೇಷ ಪಡೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಮಾವೋವಾದಿಗಳ ಗುಂಪು ಪೊಲೀಸರ ಮೇಲೇ ಗುಂಡು ಹಾರಿಸಿದ್ದು, ಪ್ರತಿಯಾಗಿ ಪೊಲೀಸರೂ ಗುಂಡು ಹಾರಿಸಿದರು.

ಇಬ್ಬರು ಸತ್ತಿದ್ದು, ಉಳಿದವರು ಪರಾರಿಯಾಗಿದ್ದಾರೆ. ಸ್ಥಳವನ್ನು ತಪಾಸಣೆ ವೇಳೆ ಇಬ್ಬರ ಶವಗಳು ಪತ್ತೆಯಾದವರು. ಇವರ ಪೈಕಿ ಒಬ್ಬನನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ.ಸತ್ಯನಾರಾಯಣ ತಿಳಿಸಿದರು.

ADVERTISEMENT

ಇನ್ನೊಬ್ಬನನ್ನು ಗುರುತಿಸುವ ಕಾರ್ಯ ನಡೆದಿದೆ. ಈ ತಿಂಗಳ ಆರಂಭದಲ್ಲಿಯೂ ಗುಂಡಿನ ಚಕಮಕಿ ನಡೆದಿದ್ದು, ಆಗ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರುಮಾವೋವಾದಿಗಳು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.