ADVERTISEMENT

ಜಾನುವಾರು ವಧೆ ಯತ್ನ: ಆರೋಪಿಗಳಿಗೆ ಗುಂಡೇಟು

ಪಿಟಿಐ
Published 11 ಜೂನ್ 2025, 14:50 IST
Last Updated 11 ಜೂನ್ 2025, 14:50 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೀರತ್‌: ಜಾನುವಾರನ್ನು ಅಕ್ರಮವಾಗಿ ವಧಿಸಲು ತೆಗೆದುಕೊಂಡು ಹೋಗುತ್ತಿದ್ದ ಆರೋಪದ ಮೇಲೆ ಇಬ್ಬರು ಯುವಕರ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. 

ಇಲ್ಲಿನ ಲೋಹಿಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗುಂಡೇಟಿನಿಂದ ಇಬ್ಬರು ಆರೋಪಿಗಳ ಕಾಲಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

‘ನಗರದ ಹೊರ ಠಾಣೆ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ ಮೂವರು ಯುವಕರು ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ಗಳಲ್ಲಿ ಬಂದರು. ಅವರಿಗೆ ವಾಹನ ನಿಲ್ಲಿಸುವಂತೆ ಸೂಚಿಸಿದಾಗ ಪೊಲೀಸರ ಮೇಲೆ ನಾಡ ಪಿಸ್ತೂಲ್‌ನಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದರು. ಪೊಲೀಸರು  ಪ್ರತಿ ದಾಳಿ ನಡೆಸಿ ಶಾರೂಕ್‌ ಮತ್ತು ಲಿಖಾಯತ್‌ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಇರ್ಫಾನ್‌ ಪರಾರಿಯಾಗಿದ್ದಾನೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.