ಶ್ರೀನಗರ:ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ಒಬ್ಬರು ಸೇರಿದಂತೆ ಇಬ್ಬರು ವಲಸೆ ಕಾರ್ಮಿಕರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ.
ಎಸ್ಎಪಿಎಸ್ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ (ಬಿಹಾರ ಮತ್ತು ನೇಪಾಳ) ಉಗ್ರರು ಗುಂಡು ಹಾರಿಸಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಗಿತ್ತು. ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಈ ದಾಳಿ ಕಣಿವೆಯ ಅಲ್ಪಸಂಖ್ಯಾತ ಸಮುದಾಯದವರಲ್ಲಿ ಭಯದ ಭಾವನೆ ಸೃಷ್ಟಿಸಿದೆ. ಕಳೆದ ಅಕ್ಟೋಬರ್‌ನಿಂದ ಕಾಶ್ಮೀರದಲ್ಲಿ ವಲಸೆ ಕಾರ್ಮಿಕರು ಮತ್ತು ಸ್ಥಳೀಯರಲ್ಲದವರ ಮೇಲೆ ಉಗ್ರರು ದಾಳಿ ತೀವ್ರಗೊಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.