ಬಂಧನ
(ಸಾಂದರ್ಭಿಕ ಚಿತ್ರ)
ಇಂಫಾಲ: ನಿಷೇಧಿತ ಕಾಂಗ್ಲೇಪಕ್ ಕಮ್ಯುನಿಸ್ಟ್ ಪಕ್ಷದ (ಪೀಪಲ್ಸ್ ವಾರ್ ಗ್ರೂಪ್) ಇಬ್ಬರು ಉಗ್ರರನ್ನು ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಲಿಗೆ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ಉಗ್ರರನ್ನು ಗುರುವಾರ ಜಿಲ್ಲೆಯ ಅವಾಂಗ್ ವನಗೈ ಲಂಖೈ ಪ್ರದೇಶದಲ್ಲಿ ಬಂಧಿಸಲಾಗಿದೆ. ಅವರ ಬಳಿಯಿದ್ದ ಎರಡು ಮೊಬೈಲ್ ಹ್ಯಾಂಡ್‌ಸೆಟ್‌ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.