ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತರಾಗಿದ್ದಾರೆ.
ಗೋಪಾಲಪುರ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ, ಭಯೋತ್ಪಾದಕರ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿದೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಭಾರಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.