ADVERTISEMENT

ಬಾರಾಮುಲ್ಲಾ: ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಪಿಟಿಐ
Published 13 ಡಿಸೆಂಬರ್ 2018, 11:52 IST
Last Updated 13 ಡಿಸೆಂಬರ್ 2018, 11:52 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಸಪೋರ್‌ನ ಬ್ರಾತ್‌ ಕಲಾನ್‌ ಪ್ರದೇಶದಲ್ಲಿ ಉಗ್ರರು ಅವಿತಿರುವ ಮಾಹಿತಿ ಆಧರಿಸಿ ಯೋಧರು ಶೋಧ ಕಾರ್ಯ ನಡೆಸುತ್ತಿದ್ದಾಗ, ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಯೋಧರು ಪ್ರತಿದಾಳಿ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಮೃತ ಉಗ್ರರ ಗುರುತು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.