ADVERTISEMENT

ಜಮ್ಮು ಮತ್ತು ಕಾಶ್ಮೀರ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಪಿಟಿಐ
Published 10 ಜನವರಿ 2022, 2:03 IST
Last Updated 10 ಜನವರಿ 2022, 2:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಲ್ಗಾಂ ಜಿಲ್ಲೆಯ ಹಸನ್‌ಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಚರಣೆ ಆರಂಭಿಸಿದ್ದವುಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಬಳಿಕ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಎನ್‌ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹತ್ಯೆಯಾಗಿರುವ ಉಗ್ರರು ಯಾವ ಭಯೋತ್ಪಾದನಾ ಸಂಘಟನೆಗೆ ಸೇರಿದವರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.