ADVERTISEMENT

ಜಮ್ಮು ಮತ್ತು ಕಾಶ್ಮೀರ: ಇಬ್ಬರು ಉಗ್ರರನ್ನು ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಅಕ್ಟೋಬರ್ 2023, 10:04 IST
Last Updated 26 ಅಕ್ಟೋಬರ್ 2023, 10:04 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚ್ಚಲ್‌ ಸೆಕ್ಟರ್‌ ಮತ್ತು ಕುಪ್ವಾರಾದಲ್ಲಿ ಭದ್ರತಾ ಪಡೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ ಮಾಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಕುಪ್ವಾರಾ ಪೊಲೀಸರು, ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ನೀಡಿದ್ದರು, ಅದರ ಅಧಾರದ ಮೇಲೆ ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ಪೊಲೀಸರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.