ADVERTISEMENT

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರು ಹತ

ಪಿಟಿಐ
Published 24 ಜುಲೈ 2021, 6:22 IST
Last Updated 24 ಜುಲೈ 2021, 6:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಬಂಡಿ‍‍ಪೊರಾದ ಶೋಕ್ಬಾಬಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಯು ಶೋಧ ನಡೆಸಿದೆ. ಈ ವೇಳೆ ಉಗ್ರರು ಮೊದಲು ದಾಳಿ ನಡೆಸಿದ್ದಾರೆ. ಇದಕ್ಕೆ ಭದ್ರತಾ ಪಡೆಯು ಪ್ರತಿದಾಳಿ ನಡೆಸಿದ್ದು, ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ಧಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಮೃತ ಉಗ್ರರ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಇನ್ನುಳಿದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.