ಗುವಾಹಟಿ: ‘ಅಸ್ಸಾಂನ ಕೊಕ್ರಾಝರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹೊಸ ಉಗ್ರ ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ’ ಎಂದು ಉನ್ನತ ಪೊಲೀಸ್ ಅಧಿಕಾರಿ ಶನಿವಾರ ತಿಳಿಸಿದರು.
‘ಶುಕ್ರವಾರ ರಾತ್ರಿ ಭದ್ರತಾ ಪಡೆಯು ಜಿಲ್ಲೆಯ ಉಲ್ಟಾಪಾನಿ ಪ್ರದೇಶದಲ್ಲಿರುವ ಯುನೈಟೆಡ್ ಲಿಬರೇಷನ್ ಆಫ್ ಬೋಡೊಲ್ಯಾಂಡ್ (ಯುಎಲ್‌ಬಿ) ಶಿಬಿರದ ಮೇಲೆ ದಾಳಿ ನಡೆಸಿದೆ. ಈ ವೇಳೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ’ ಎಂದು ಅಸ್ಸಾಂ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ ಜಿಪಿ ಸಿಂಗ್ ಅವರು ಟ್ವೀಟ್ ಮಾಡಿದ್ದಾರೆ.
‘ಘಟನಾ ಸ್ಥಳದಿಂದ ಎರಡು ಪಿಸ್ತೂಲ್ ಮತ್ತು ಗ್ರೆನೇಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.