ADVERTISEMENT

ಉತ್ತರಾಖಂಡ | ನೀರ್ಗಲ್ಲು ಕುಸಿತ: ಮೃತರ ಸಂಖ್ಯೆ 58ಕ್ಕೆ ಏರಿಕೆ

ಪಿಟಿಐ
Published 16 ಫೆಬ್ರುವರಿ 2021, 7:00 IST
Last Updated 16 ಫೆಬ್ರುವರಿ 2021, 7:00 IST
ಎನ್‌ಡಿಆರ್‌ಎಫ್‌ನ ರಕ್ಷಣಾ ಕಾರ್ಯಾಚರಣೆ
ಎನ್‌ಡಿಆರ್‌ಎಫ್‌ನ ರಕ್ಷಣಾ ಕಾರ್ಯಾಚರಣೆ   

ತಪೋವನ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದಿಂದ ಉಂಟಾದ ಪ್ರವಾಹಕ್ಕೆ ಸಿಲುಕಿದ್ದವರ ಪತ್ತೆ ಕಾರ್ಯ 10ನೇ ದಿನವೂ ಮುಂದುವರಿದಿದ್ದು, ಮಂಗಳವಾರ ಎರಡು ಶವಗಳನ್ನು ಹೊರತೆಗೆಯಲಾಗಿದೆ.

ಇದರೊಂದಿಗೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿದೆ. ಇನ್ನೂ 146 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ ತಪೋವನ–ವಿಷ್ಣುಗಡ್ ಯೋಜನೆಯ ಸುರಂಗದಲ್ಲಿ 11 ಶವಗಳು ಪತ್ತೆಯಾಗಿವೆ.

ಚಮೋಲಿ ಜಿಲ್ಲೆಯ ತಪೋವನ ಸುರಂಗವನ್ನು ಕೇಂದ್ರೀಕರಿಸಿ ವಿವಿಧ ಏಜೆನ್ಸಿಗಳು ರಕ್ಷಣಾ ಕಾರ್ಯ ಕೈಗೊಂಡಿವೆ. ಅಲ್ಲಿ ಸುಮಾರು 30 ಕಾರ್ಮಿಕರು ಸಿಕ್ಕಿಬಿದ್ದಿರಬಹುದು ಎನ್ನಲಾಗಿದೆ.

ADVERTISEMENT

ತಪೋವನ ವ್ಯಾಪ್ತಿಯಲ್ಲಿ ಇಂಡೊ-ಟಿಬೆಟಿಯನ್ ಬಾರ್ಡರ್ ಪೊಲೀಸ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು (ಎಸ್‌ಡಿಆರ್‌ಎಫ್‌) ಪರಿಹಾರ ಕಾರ್ಯಾಚರಣೆ ನಡೆಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.