ಸಾಂದರ್ಭಿಕ ಚಿತ್ರ
ಚಂಡೀಗಢ: ಲಾರೆನ್ಸ್ ಬಿಷ್ಣೋಯಿ ಹಾಗೂ ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಸದಸ್ಯರನ್ನು ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಜಲಂಧರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಅವರನ್ನು ಬಂಧಿಸಲಾಗಿದೆ.
ಪೊಲೀಸರ ಮೇಲೆ ಆರೋಪಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಓರ್ವನಿಗೆ ಗುಂಡಿನಿಂದ ತರಚಿದ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
‘ಪ್ರಮುಖವಾದ ಬೆಳವಣಿಗೆಯೊಂದರಲ್ಲಿ, ಜಲಂಧರ್ ಕಮೀಷನರೇಟ್ ಪೊಲೀಸರು, ಲಾರೆನ್ಸ್ ಬಿಷ್ಣೋಯಿ– ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ. ಅವರನ್ನು ಬೆನ್ನತ್ತಿದ್ದು, ಗ್ಯಾಂಗ್‌ನ ಸದಸ್ಯರು ಗುಂಡಿನ ದಾಳಿ ಮಾಡಿದಾಗ, ಸ್ವಯಂ ರಕ್ಷಣೆಗೆ ಪೊಲೀಸರು ಗುಂಡು ಹಾರಿಸಿದ್ದಾರೆ’ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
‘ಓರ್ವ ಆರೋಪಿಗೆ ಗುಂಡಿನ ಗಾಯಗಳಾಗಿದ್ದು, ಅವನಿಗೆ ಚಿಕಿತ್ಸೆ ನಡೆಯುತ್ತಿದೆ. ಇನ್ನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಬಂಧಿಸಲಾಗಿದೆ’ ಎಂದು ಯಾದವ್ ಮಾಹಿತಿ ನೀಡಿದ್ದಾರೆ.
ನಾಲ್ಕು ಆಯುಧಗಳು ಹಾಗೂ ಜೀವಂತ ಗುಂಡುಗಳನ್ನು ಅವರಿಂದ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಇದು ಮಾದಕ ದ್ರವ್ಯ ಕಳ್ಳಸಾಗಣೆ, ಶಸ್ತ್ರಾಸ್ತ್ರ ವ್ಯಾಪಾರ ಮತ್ತು ಸುಲಿಗೆ ದಂಧೆಗಳಲ್ಲಿ ತೊಡಗಿರುವ ಗ್ಯಾಂಗ್‌ನ ಅಪರಾಧ ಜಾಲಕ್ಕೆ ತೀವ್ರ ಹೊಡೆತವನ್ನು ನೀಡಿದೆಎಂದು ಡಿಜಿಪಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.