ADVERTISEMENT

ಬಿಎಸ್‌ಎಫ್‌ನಿಂದ ಪಾಕ್‌ನ ಇಬ್ಬರು ನುಸುಳುಕೋರರ ಹತ್ಯೆ

ಪಿಟಿಐ
Published 2 ಮೇ 2023, 13:19 IST
Last Updated 2 ಮೇ 2023, 13:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ/ ಬರ್ಮರ್‌: ಮಾದಕವಸ್ತುಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದರು ಎಂದು ಶಂಕಿಸಲಾದ ಪಾಕಿಸ್ತಾನದ ಇಬ್ಬರು ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಭಾರತ–ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಕೊಂದು ಹಾಕಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

‘ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳದಿಂದ ಮೂರು ಕೆ.ಜಿ ಹೆರಾಯಿನ್‌ ವಶಕ್ಕೆ ಪಡೆಯಲಾಗಿದೆ’ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

‘ಗಡಿಯಲ್ಲಿ ಬಿಎಸ್‌ಎಫ್‌ ಯೋಧರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅನುಮಾನಾಸ್ಪದ ಚಲನವಲನ ಕಂಡುಬಂತು. ತಕ್ಷಣವೇ ಕಾರ್ಯಪ್ರವೃತ್ತರಾದ ಯೋಧರು ನುಸುಳುಕೋರರಿಗೆ ಎಚ್ಚರಿಕೆ ನೀಡಿದರು. ಇದನ್ನು ಲೆಕ್ಕಿಸದೆ ಅವರು ಒಳನುಸುಳುತ್ತಿದ್ದ ಕಾರಣ ಯೋಧರು ಗುಂಡಿನ ದಾಳಿ ನಡೆಸಿದರು’ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.