ADVERTISEMENT

ಬಂಡೆ ಉರುಳಿ ಬಿದ್ದು ಇಬ್ಬರು ಯಾತ್ರಿಗಳು ಸಾವು

ಪಿಟಿಐ
Published 8 ಆಗಸ್ಟ್ 2022, 14:34 IST
Last Updated 8 ಆಗಸ್ಟ್ 2022, 14:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇಗುಲದ ಪರ್ವತದ ಮೇಲಿಂದ ಬಂಡೆಯೊಂದು ಉರುಳಿ ಬಿದ್ದ ಪರಿಣಾಮ ಇಬ್ಬರು ಯಾತ್ರಾರ್ಥಿಗಳು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಗೋರಖ್‌ಪುರದ ಸರ್ವಂತ್‌ ಸಹಾನಿ (45) ಮತ್ತು ಜಮ್ಮು–ಕಾಶ್ಮೀರದ ನಿರ್ಮಲ್‌ ಸಿಂಗ್ (18) ಮೃತರು.

ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ದೇಗುಲ ಪ್ರವೇಶಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಬಂಡೆಯೊಂದು ಉರುಳಿ ಬಿದ್ದು ದುರಂತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.