ADVERTISEMENT

ನಾಗ್ಪುರ: ಎರಡು ಶಂಕಿತ ಎಚ್‌ಎಂಪಿವಿ ಪ್ರಕರಣ ಪತ್ತೆ

ಪಿಟಿಐ
Published 7 ಜನವರಿ 2025, 14:09 IST
Last Updated 7 ಜನವರಿ 2025, 14:09 IST
   

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಶಂಕಿತ ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ಸೋಂಕಿನ ಎರಡು ಪ್ರಕರಣಗಳು ವರದಿಯಾಗಿವೆ.

‘ಏಳು ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿರುವ ಇಬ್ಬರೂ ಈಗ ಆರೋಗ್ಯವಾಗಿದ್ದಾರೆ’ ಎಂದು ಜಿಲ್ಲಾಧಿಕಾರಿ ವಿಪಿನ್‌ ಇಟನ್ಕರ್‌ ಮಂಗಳವಾರ ತಿಳಿಸಿದ್ದಾರೆ.

‘ಶಂಕಿತ ಎಚ್‌ಎಂಪಿವಿ ಪ್ರಕರಣ ಇದಾಗಿರುವುದರಿಂದ ಇಬ್ಬರ ಮಾದರಿಗಳನ್ನು ಸಂಗ್ರಹಿಸಿ ಎಐಐಎಂಎಸ್‌ ಮತ್ತು ಪುಣೆಯ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ವೈರಾಲಜಿಗೆ ಕಳುಹಿಸಲಾಗಿದೆ’ ಎಂದಿದ್ದಾರೆ.

ADVERTISEMENT

ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ನಲ್ಲಿ ಒಟ್ಟು ಐದು ಎಚ್‌ಎಂಪಿವಿ ಪ್ರಕರಣಗಳು ಈಗಾಗಲೇ ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.