ADVERTISEMENT

ಕೇರಳ|ಕೃಷಿ ಭೂಮಿಯಲ್ಲಿ ಬಾಂಬ್ ಪತ್ತೆ

ಪಿಟಿಐ
Published 13 ಮೇ 2025, 10:30 IST
Last Updated 13 ಮೇ 2025, 10:30 IST
   

ಕಣ್ಣೂರು: ಕೇರಳದ ಉತ್ತರ ಭಾಗದ ಮೂಲ್ಯತೋಡು ಬಳಿಯ ಖಾಸಗಿ ಜಮೀನಿನಲ್ಲಿ ಮಂಗಳವಾರ ಎರಡು ಉಕ್ಕಿನ ಬಾಂಬ್ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ವರ್ಷ, ಇದೇ ಜಾಗದಲ್ಲಿ ದೇಶಿ ಸ್ಫೋಟಕಗಳನ್ನು ತಯಾರಿಸುವ ವೇಳೆ ನಡೆದ ಅವಘಡದಲ್ಲಿ ಒಬ್ಬರು ಮೃತ ಪಟ್ಟಿದ್ದು, ಇನ್ನೊಬ್ಬರಿಗೆ ಗಂಭೀರ ಗಾಯವಾಗಿತ್ತು.

ಮಂಗಳವಾರ ಬೆಳಿಗ್ಗೆ, ಶಂಕಿತ ಸ್ಪೋಟಕಗಳು ಪತ್ತೆಯಾಗಿರುವ ಬಗ್ಗೆ, ಜಮೀನಿನ ಮಾಲೀಕ ನೀಡಿದ ಮಾಹಿತಿ ಮೇರೆಗೆ ತಕ್ಷಣವೇ ಪೊಲೀಸ್ ಹಾಗೂ ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಜಮೀನಿನ ಮಾಲೀಕನ ತಮ್ಮನು, ಕೃಷಿ ಕೆಲಸ ಮಾಡಲು ತೆರಳಿದಾಗ ಶಂಕಿತ ಸ್ಪೋಟಕಗಳು ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ಸ್ಥಳದಲ್ಲಿ ಎರಡು ಉಕ್ಕಿನ ಬಾಂಬ್‌ಗಳು ಪತ್ತೆಯಾಗಿದ್ದು, ಅವುಗಳನ್ನು ಹೆಚ್ಚಿನ ಪರಿಶೀಲನೆಗೆ ತೆಗೆದುಕೊಂಡು ಹೋಗಲಾಗಿದೆ. ಪೊಲೀಸ್ ಹಾಗೂ ಬಾಂಬ್ ನಿಷ್ಕ್ರಿಯ ದಳವು, ಸ್ಥಳವನ್ನು ಪರಿಶೀಲನೆ ಮಾಡುತ್ತಿದೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.