ಸಾವು
(ಪ್ರಾತಿನಿಧಿಕ ಚಿತ್ರ)
ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಜೌರಿ–ಕೊಟ್ರಂಕಾ ರಸ್ತೆಯ ನಗ್ರೋಟಾ ಬಳಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರ ಮತ್ತು ಕಲ್ಲು ಬಂಡೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದ್ದಾರೆ.
ಅವಘಡದಲ್ಲಿ 12ನೇ ತರಗತಿಯ ವಿದ್ಯಾರ್ಥಿ ಸಮೀರ್ ಅಹ್ಮದ್ (17) ಹಾಗೂ ಬೈಕ್ ಸವಾರ ಖುದಾ ಬಕ್ಷ್ (19) ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.