ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಡಗು ತಾಣ ಪತ್ತೆ: ಇಬ್ಬರ ಬಂಧನ

ಪಿಟಿಐ
Published 9 ಫೆಬ್ರುವರಿ 2024, 5:05 IST
Last Updated 9 ಫೆಬ್ರುವರಿ 2024, 5:05 IST
   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆ ಅಧಿಕಾರಿಗಳು ಎರಡು ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆ ಮಾಡಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದೆ. ಭಯೋತ್ಪಾದಕ ಕಮಾಂಡರ್ ಅಬ್ದುಲ್ ಕಯೂಮ್ ನಜರ್ ಮತ್ತು ಈತನ ಸಂಬಂಧಿ  ಅಬ್ದುಲ್ ರಶೀದ್ ನಜರ್ ಬಂಧಿತರು. ಇದು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಾಗಾಣಿಕೆಯ ಜಾಲವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧದ ವೇಳೆ ರಶೀದ್ ಮತ್ತು ಅಬ್ದುಲ್‌ ಅವರ ವಸತಿ ಗೃಹದಲ್ಲಿ ರಹಸ್ಯ ಅಡಗುತಾಣ ಪತ್ತೆಯಾಗಿದೆ. ಇದರಿಂದ ಶಸ್ತ್ರಾಸ್ತ್ರ, ಮದ್ದುಗುಂಡು, ಐಇಡಿಗಳು, ಪಿಸ್ತೂಲ್, ಪಿಸ್ತೂಲ್ ಮ್ಯಾಗಜೀನ್, ಜೀವಂತ ಮದ್ದುಗುಂಡುಗಳು ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.