ADVERTISEMENT

ಜಮ್ಮು-ಕಾಶ್ಮೀರ: ಗಡಿಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಬಲಿ

ಏಜೆನ್ಸೀಸ್
Published 22 ಏಪ್ರಿಲ್ 2020, 3:39 IST
Last Updated 22 ಏಪ್ರಿಲ್ 2020, 3:39 IST
ಜಮ್ಮು ಕಾಶ್ಮೀರದಲ್ಲಿ ಗಡಿಭದ್ರತಾ ಪಡೆ
ಜಮ್ಮು ಕಾಶ್ಮೀರದಲ್ಲಿ ಗಡಿಭದ್ರತಾ ಪಡೆ   

ಜಮ್ಮು-ಕಾಶ್ಮೀರ: ಇಲ್ಲಿನದಕ್ಷಿಣ ಕಾಶ್ಮೀರದ ಸೊಫಿಯಾನ್ ಜಿಲ್ಲೆ ಸಮೀಪ ಗಡಿಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಬುಧವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಆರಂಭಗೊಂಡಿರುವ ಕಾರ್ಯಾಚರಣೆ ಮುಂದುವರಿದಿದ್ದು, ಇನ್ನೂ ಹಲವರು ಅಡಗಿದ್ದು, ಅಡಗುತಾಣಗಳನ್ನು ಗಡಿಭದ್ರತಾ ಪಡೆಗಳು ಸುತ್ತುವರಿದಿವೆ.

ಮಂಗಳವಾರ ರಾತ್ರಿ ಇಲ್ಲಿನ ಮಲ್ಹುರಾ ಜನ್ ಪೋರಾ ಗ್ರಾಮಗಳಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ಕೈಗೊಂಡವು.ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸೆರೆಸಿಕ್ಕಿದ್ದು, ಇಬ್ಬರು ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.