ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಲ್ಹೊರಾ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
‘ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಂದು ‘ಎಕೆ ಬಂದೂಕು’ ಮತ್ತು ಒಂದು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಕ್ತಾಯವಾಗಿದೆ’ ಎಂದು ಭಾರತೀಯ ಸೇನೆ ತಿಳಿಸಿದೆ.
ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಬೆಳಿಗ್ಗೆ ಸೇನೆಯ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.