ADVERTISEMENT

ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಮೇ 2022, 9:27 IST
Last Updated 8 ಮೇ 2022, 9:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು– ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತರಾದ ಇಬ್ಬರು ಉಗ್ರರಲ್ಲಿ ಲಷ್ಕರ್‌ ಎ ತಯಬಾದ (ಎಲ್‌ಇಟಿ) ಪಾಕಿಸ್ತಾನಿ ಭಯೋತ್ಪಾದಕನೂ ಸೇರಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕುಲ್ಗಾಂನಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಶೋಧ ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.