ADVERTISEMENT

ಕುಪ್ವಾರದಲ್ಲಿ ಇಬ್ಬರು ಉಗ್ರರ ಹತ್ಯೆ: ಮದ್ದು ಗುಂಡುಗಳು ವಶ

ಪಿಟಿಐ
Published 25 ಸೆಪ್ಟೆಂಬರ್ 2022, 10:54 IST
Last Updated 25 ಸೆಪ್ಟೆಂಬರ್ 2022, 10:54 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಇಲ್ಲಿನ ಮಚಿಲ್‌ ಪ್ರದೇಶದಲ್ಲಿನಗಡಿ ನಿಯಂತ್ರಣ ರೇಖೆ (ಎಲ್ಒಸಿ) ಸಮೀಪ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಹತ್ಯೆಗೀಡಾದ ಭಯೋತ್ಪಾದಕರ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಎರಡು ಎ.ಕೆ 47 ರೈಫಲ್, ಎರಡು ಪಿಸ್ತೂಲ್ ಮತ್ತು 4 ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.