ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ನಕ್ಸಲರನ್ನು ಬಂಧಿಸಿರುವ ಪೊಲೀಸರು ಅವರಿಂದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ನಕ್ಸಲರು ಹುತಾತ್ಮರ ಸಪ್ತಾಹ (ಜುಲೈ 28– ಆ.3) ಆಚರಿಸುತ್ತಿರುವ ಸಂದರ್ಭದಲ್ಲೇ ಈ ಬಂಧನ ನಡೆದಿದೆ.
ಬಾಸಾಗುಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಧರ್ಮಪುರ ಸಮೀಪದ ಕಾಡಿನಿಂದ ಉಯಿಕಾ ಸೇತು (32), ಉಯಿಕಾ ಪೇಕಿ (33) ಎಂಬ ಇಬ್ಬರು ಮಹಿಳಾ ನಕ್ಸಲರು ಸೇರಿದಂತೆ ಆರು ನಕ್ಸಲರನ್ನು ಭದ್ರತಾ ಪಡೆಗಳು ಮಂಗಳವಾರ ಬಂಧಿಸಿವೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಸೇತು ಅವರು ದಂಡಕಾರಣ್ಯ ಆದಿವಾಸಿ ಕಿಸಾನ್ ಮಜ್ದೂರ್ ಸಂಘದ ಅಧ್ಯಕ್ಷರಾಗಿದ್ದರೆ, ಪೇಕಿ ಅವರು ಕ್ರಾಂತಿಕಾರಿ ಆದಿವಾಸಿ ಮಹಿಳಾ ಸಂಘದ ಮುಖ್ಯಸ್ಥರಾಗಿದ್ದರು. ಇಬ್ಬರ ಸುಳಿವಿಗೆ ತಲಾ ₹1ಲಕ್ಷ ಬಹುಮಾನ ಘೋಷಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.