ಗರಿಯಾಬಂದ್, ಛತ್ತೀಸಗಢ: ನಕ್ಸಲರು ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲರು ಮೃತಪಟ್ಟಿದ್ದಾರೆ.
‘ಒಡಿಶಾ ಗಡಿಗೆ ಹೊಂದಿಕೊಂಡಿರುವ ಮೈನ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ನಕ್ಸಲರು ದಾಳಿ ನಡೆಸಿದರು. ಪ್ರತಿದಾಳಿ ವೇಳೆ ಇಬ್ಬರು ನಕ್ಸಲರು ಮೃತಪಟ್ಟರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ರಖೇಚಾ ತಿಳಿಸಿದರು.
‘ಜಿಲ್ಲಾ ಮೀಸಲು ಪೊಲೀಸ್ ಪಡೆ (ಡಿಆರ್ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಛತ್ತೀಸಗಢ ಕೋಬ್ರಾ ಪಡೆಯವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಕೋಬ್ರಾ ಪಡೆಯ ಸಿಬ್ಬಂದಿಗೆ ಗುಂಡೇಟು ತಗುಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ರಾಯಪುರಕ್ಕೆ ಕಳುಹಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದರು.
ಈ ವರ್ಷದ ಜನವರಿಯಿಂದ ಈಚೆಗೆ ರಾಜ್ಯದ ವಿವಿಧೆಡೆ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 28 ನಕ್ಸಲರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.