ಚೆನ್ನೈ: ತಮಿಳುನಾಡಿನ ದಕ್ಷಿಣ ವಿರುಧುನಗರ ಜಿಲ್ಲೆಯಲ್ಲಿ ಪಟಾಕಿ ತಯಾರಿಕಾ ಘಟಕ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇತರ ನಾಲ್ವರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲೇ 54 ವರ್ಷದ ಮಹಿಳೆ ಮತ್ತು 37 ವರ್ಷದ ಪುರುಷ ಮೃತಪಟ್ಟಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಗಾಯಗೊಂಡವರು ವಿರುಧುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದು, ಗಂಭೀರ ಗಾಯಗೊಂಡವರಿಗೆ ತಲಾ ₹ 1 ಲಕ್ಷ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.