ಜಮ್ಮು : ಎರಡು ದಿನಗಳ ಹಿಂದೆ ಸೇನೆಯ ಕಣ್ಗಾವಲು ಕಾರ್ಯಾಚರಣೆಯಲ್ಲಿದ್ದ ಮಾನವರಹಿತ ವೈಮಾನಿಕ ವಾಹನ (ಯುಎವಿ) ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದ ಸೇನೆಯ ಡಿಎಸ್‌ಸಿ ಪಡೆಯ ಯೋಧರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಲ್ಲಿನ ಕಠುವಾ ಜಿಲ್ಲೆಯ ನಿವಾಸಿ ನಾಯಕ್ ಸುರೇಂದರ್ ಅವರು ಗುರುವಾರ ಇಲ್ಲಿನ ವಿಮಾನ ನಿಲ್ದಾಣದ ಟವರ್‌ನಲ್ಲಿ ಕಾವಲು ಕಾಯುತ್ತಿದ್ದರು. ಈ ವೇಳೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದ ಯುಎವಿಯು ಟವರ್‌ಗೆ ಡಿಕ್ಕಿ ಹೊಡೆದು ಸ್ಫೋಟಗೊಂಡಿತ್ತು. ಇದರಿಂದ ಸುರೇಂದರ್ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದು, ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಸ್ಥಳಾಂತರಿಸಲಾಯಿತು.
ಜಮ್ಮುವಿನ ಸತ್ವಾರಿಯಲ್ಲಿರುವ ತಾಂತ್ರಿಕ ವಿಮಾನ ನಿಲ್ದಾಣವನ್ನು ಭಾರತೀಯ ವಾಯುಸೇನೆಯ ಹೆಲಿಕಾಪ್ಟರ್‌ಗಳ ಹಾರಾಟಕ್ಕೆ ಬಳಸಲಾಗುತ್ತದೆ.
ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಬಿಎನ್‌ಎಸ್‌ನ ಸೆಕ್ಷನ್ 194 (ಅನುಮಾನಾಸ್ಪದ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.