ನವದೆಹಲಿ: ರಾಜಸ್ಥಾನದ ಉದಯಪುರದ ಟೇಲರ್ ಕನ್ಹಯ್ಯ ಲಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದಇಬ್ಬರು ಪೌರರು ಸೇರಿದಂತೆ 11 ಮಂದಿಯ ವಿರುದ್ಧ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಗುರುವಾರ ಆರೋಪಪಟ್ಟಿ ಸಲ್ಲಿಸಿದೆ.
ಕನ್ಹಯ್ಯ ಲಾಲ್ (48) ಅವರನ್ನು ಜೂನ್ 28ರಂದು ಅವರ ಅಂಗಡಿಯಲ್ಲಿ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು. ಇಸ್ಲಾಂಗೆ ಅವಮಾನ ಮಾಡಿದ್ದಕ್ಕೆ ಹತ್ಯೆ ಮಾಡಿರುವುದಾಗಿ ಆರೋಪಿಗಳು ಹೇಳಿದ್ದರು.
ಈ ಕುರಿತು ಉದಯಪುರದ ಧನ್ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.