ಮುಂಬೈ: ಮಹಾರಾಷ್ಟ್ರದ ವಿಧಾನಪರಿಷತ್ತಿನ ವಿರೋಧಪಕ್ಷದ ನಾಯಕನ ಸ್ಥಾನಕ್ಕೆ ಶಾಸಕ ಅಂಬಾದಾಸ್ ದಾನ್ವೆ ಅವರನ್ನು ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ ನಾಮನಿರ್ದೇಶನ ಮಾಡಿದ್ದಾರೆ.
ವಿಧಾನಪರಿಷತ್ತಿನ ಅಧ್ಯಕ್ಷರಿಗೆ ಪತ್ರ ಬರೆದಿರುವ ಉದ್ಧವ್ ಅವರು, ಜುಲೈ 9ರಂದು ನಡೆದ ಸಭೆಯಲ್ಲಿ ಪಕ್ಷದ ಶಾಸಕರು ವಿರೋಧಪಕ್ಷದ ನಾಯಕನ ಸ್ಥಾನಕ್ಕೆ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಲು ಅಧಿಕಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.