
ಪ್ರಜಾವಾಣಿ ವಾರ್ತೆಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಮತ್ತು ಉದ್ದವ್ ಠಾಕ್ರೆಯವರ ಪುನರ್‌ಮಿಲನವಾಗುತ್ತಿದ್ದಂತೆ, ರಾಜಕೀಯ ಸಮೀಕರಣಗಳು ಬದಲಾಗುವ ಸಾಧ್ಯತೆ ಇದೆ. ‘ನಾವು ಒಂದಾಗದಿದ್ದರೆ ವಿನಾಶ’ ಎನ್ನುವ ಘೋಷವಾಕ್ಯ ಮನದಲ್ಲಿಟ್ಟುಕೊಂಡು ಠಾಕ್ರೆ ಸಹೋದರರು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದಾರೆ. ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಂದ್ರೆ, ಬಿಎಂಸಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಮೂಲಕ 20 ವರ್ಷಗಳ ನಂತರ ಉದ್ದವ್ ಮತ್ತು ರಾಜ್ ಠಾಕ್ರೆ ಒಂದುಗೂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.