ADVERTISEMENT

ಮಧ್ಯಂತರ ಚುನಾವಣೆಗೆ ಸಿದ್ಧರಾಗಿ; ಪಕ್ಷದ ಕಾರ್ಯಕರ್ತರಿಗೆ ಉದ್ಧವ್ ಠಾಕ್ರೆ ಕರೆ

ಮೃತ್ಯುಂಜಯ ಬೋಸ್
Published 5 ನವೆಂಬರ್ 2022, 14:32 IST
Last Updated 5 ನವೆಂಬರ್ 2022, 14:32 IST
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ   

ಮುಂಬೈ: ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ, ಶಿವ ಸೇನಾ ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ.

ಮತ್ತೊಂದೆಡೆ ಮುಖ್ಯಂತ್ರಿ ಏಕನಾಥ ಶಿಂಧೆ ಅವರ ಶಿವ ಸೇನಾದ ಬಂಡಾಯ ಬಣ ಹಾಗೂ ಬಿಜೆಪಿಯು ಉದ್ಧವ್ ಠಾಕ್ರೆ ಹೇಳಿಕೆಯನ್ನು ಅಲ್ಲಗಳೆದಿದ್ದು, ಸರ್ಕಾರವು ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯಬಹುದು. ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದು ಠಾಕ್ರೆ ಭವಿಷ್ಯ ನುಡಿದರು.

ಅಸಂವಿಧಾನಿಕ ಸರ್ಕಾರ ಜಾರಿಯಲ್ಲಿದೆ. ಸುಪ್ರೀಂಕೋರ್ಟ್ ತೀರ್ಪು ನೀಡಿದಾಗ ಸರ್ಕಾರದ ಭವಿಷ್ಯ ಏನಾಗಲಿದೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ನಾವು ಸಿದ್ಧರಾಗಿರಬೇಕು ಎಂದು ಶಿವ ಸೇನಾ ವಕ್ತಾರ ತಿಳಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಏಕನಾಥ ಶಿಂಧೆ ಬಣದ ವಕ್ತಾರ ದೀಪಕ್ ಕೇಸರ್‌ಕರ್, ಠಾಕ್ರೆ ಸಿದ್ಧಾಂತದಿಂದ ದೂರ ಸರಿದಿದ್ದು, ಜನರ ಸ್ಥೈರ್ಯ ಹೆಚ್ಚಿಸಲು ಇಂತಹ ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.