ಮುಂಬೈ: ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದು ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ 16 ಮಂದಿ ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದ ಹಾಗೂ ಇತರ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಇಂದು (ಸೋಮವಾರ) ವಿಚಾರಣೆಗೆ ಬರುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಉದ್ಧವ್ ಪ್ರತಿಕ್ರಿಯೆ ನೀಡಿದ್ದಾರೆ.
‘ಏನೇ ಬರಲಿ, ನಾವು ಸಿದ್ಧರಿದ್ದೇವೆ. ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ’ ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ, ಏಕನಾಥ ಶಿಂದೆ ಅವರ ಬಣವನ್ನು ನೈಜ ಶಿವಸೇನಾ ಎಂದು ಗುರುತಿಸುವ ಭಾರತೀಯ ಚುನಾವಣಾ ಆಯೋಗದ ಪ್ರಕ್ರಿಯೆಗೆ ತಡೆಯೊಡ್ಡಬೇಕು ಎಂದು ಉದ್ಧವ್ ಸಲ್ಲಿಸಿದ್ದ ಅರ್ಜಿಯೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.